23 September 2021

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಕೋಟಾ ಶ್ರೀ ನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಸಚಿವರಲ್ಲಿ ಕೇಳಿಕೊಂಡರು.
ವಿವಿಧ ಅಭಿವೃದ್ಧಿ ನಿಗಮಗಳಾದ ಗಂಗಾ ಕಲ್ಯಾಣ ,ನೇರ ಸಾಲ, ಉದ್ಯಮಶೀಲತೆ, ಮೈಕ್ರೋಪೈನಾನ್ಸ್, ಯೋಜನೆಗಳಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿ ಗುರಿಯನ್ನು ನಿಗದಿಪಡಿಸುವಂತೆ ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ಸಚಿವರಲ್ಲಿ ಮನವಿ ಮಾಡಿದರು.
ಶಾಸಕರ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಕೂಡಲೇ ಅನುದಾನ ಬಿಡುಗಡೆ ಮಾಡಿ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುವುದಾಗಿ ಭರವಸೆ ನೀಡಿದರು.