ಶಿವಮೊಗ್ಗ, ಜನವರಿ 17 : : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಶ್ರಯದಲ್ಲಿ ನಗರದ ಸಹ್ಯಾದ್ರಿ ಕಾಲೇಜಿನ ಸಹಯೋಗದಲ್ಲಿ ಜ.24 ರಂದು ಬೆಳಿಗ್ಗೆ 09.00ಕ್ಕೆ ನಗರದ ಸಹ್ಯಾದ್ರಿ ಕಾಲೇಜ್‍ನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ 40 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಲಭ್ಯವಿರುವ 1500ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಆಟೋಮೊಬೈಲ್, ಬ್ಯಾಂಕಿಂಗ್, ರಿಟೇಲ್, ವಿಮೆ, ಗಾರ್ಮೆಂಟ್ಸ್, ಭದ್ರತಾ ಕ್ಷೇತ್ರಗಳ ಉದ್ಯೋಗದಾತರು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲಮೋ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-255293 / 8762778408/8310484407 ಗಳನ್ನು ಸಂಪರ್ಕಿಸುವುದು.

error: Content is protected !!