ಶಿವಮೊಗ್ಗ, ಡಿ.17: ಪ್ರಸ್ತುತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಭತ್ತ ಖರೀದಿಗೆ ನೋಂದಣಿ ದಿನಾಂಕವನ್ನು ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದ್ದಾರೆ.ರೈತರು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಲು ವಿಸ್ತರಿಸಲಾಗಿರುವ ದಿನಾಂಕದ ಉಪಯೋಗಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

error: Content is protected !!