ಶಿವಮೊಗ್ಗ, ಏಪ್ರಿಲ್ 06 ಪ್ರತಿಯೊಬ್ಬ ನಾಗರೀಕರು ಮತದಾನ ಮಾಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ ಹಾಗೂ ಕೆಎಸ್‍ಆರ್‍ಪಿ ಮಾಚೇನಹಳ್ಳಿ ಇವರ ವತಿಯಿಂದ ಶನಿವಾರ ಮಾಚೇನಹಳ್ಳಿಯ ಕೆಎಸ್‍ಆರ್‍ಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಲೋಕಸಭಾ ಚುನಾವಣೆ 2024ರ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ಸ್ವೀಪ್ ಕಾರ್ಯಕ್ರಮದ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸುತ್ತಿದೆ. ದೇಶದ ಭವಿಷ್ಯವನ್ನು ನಿರ್ಧರಿಸುವ ಈ ಚುನಾವಣೆಯಲ್ಲಿ ಪ್ರತಿಯೊಬ್ಬರು ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕು. ಪೊಲೀಸ್ ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಗೆ ತೆರಳುವ ಸಂದರ್ಭ ಬಂದಲ್ಲಿ ಕಡ್ಡಾಯವಾಗಿ ಅಂಚೆ ಮತದಾನದ ಮೂಲಕ ಮತವನ್ನು ಚಲಾಯಿಸಬೇಕು.
ನೀವು ಮತದಾನ ಮಾಡುವುದರ ಜೊತೆಗೆ ನಿಮ್ಮ ಕುಟುಂಬದವರಿಗೂ ಹಾಗೂ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಜನರಿಗೂ ಮತದಾನದ ಬಗ್ಗೆ ಅರಿವು ಮೂಡಿಸಿ ಶೇ. 100 ರಷ್ಟು ಮತದಾನ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಆಗಬೇಕು. ಅದ್ದಕ್ಕಾಗಿ ಪ್ರತಿಯೊಬ್ಬರು ತಮ್ಮ ಕರ್ತವ್ಯ ಎಂದು ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಅವರು ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬೇಕು ಎನ್ನುವ ಉದ್ದೇಶದಿಂದ 85 ವರ್ಷ ಮತ್ತು ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ. 40 ಕ್ಕೂ ಅಧಿಕ ಅಂಗವಿಕಲತೆ ಹೊಂದಿರುವ ವಿಶೇಷ ವಿಕಲಚೇತನರಿಗಾಗಿ ಅರ್ಜಿ ನಮೂನೆ 12 ಡಿ ಅಂಚೆ ಮತದಾನದ ಮೂಲಕ ಮನೆಯಿಂದಲೇ ಮತದಾನ ಚಲಾಯಿಸುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ.
ಮತದಾರರ ನೋಂದಣಿ ಹಾಗೂ ತಿದ್ದುಪಡಿ ಮಾಡಲು ಏಪ್ರಿಲ್ 9 ರವರೆಗೆ ಅವಕಾಶ ಕಲ್ಪಿಸಲಾಗಿz.É ಹೊಸ ಸೇರ್ಪಡೆಗಾಗಿ ನಮೂನೆ 6 ಹಾಗೂ ಯಾವುದೇ ತಿದ್ದುಪಡಿಗಳಿಗಾಗಿ ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿz.É ವೋಟರ್ ಹೆಲ್ಪ್‍ಲೈನ್ ಆಪ್, ಸಿ-ವಿಜಿಲ್ ಆಪ್ ಮೂಲಕ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದರು.
ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಮಾತನಾಡಿ, ಸ್ವೀಪ್ ಚಟುವಟಿಕೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿ, ಕೆಎಸ್‍ಆರ್‍ಪಿ ಪೊಲೀಸ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಪಾಸಿಂಗ್ ದಿ ಬಾಲ್ ಒಳಾಂಗಣ ಕ್ರೀಡಾಕೂಟ ನಡೆಸಿಕೊಟ್ಟರು.
ಚುನಾವಣೆ ಗೀತೆಯಾದ ‘ನಾ ಭಾರತ’ ಗೀತೆಯನ್ನು ಪ್ರಸ್ತುತ ಪಡಿಸಿ, ಮೇ 7 ರಂದು ನಡೆಯುವ ಮತದಾನದಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷಣೆಯೊಂದಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಈ ಸಂಧರ್ಭದಲ್ಲಿ ಕೆಎಸ್‍ಆರ್‍ಪಿ ಕಮಾಂಡೆಂಟ್ ಯುವಕುಮಾರ್, ಅಸಿಸ್ಟೆಂಟ್ ಕಮಾಂಡೆಂಟ್ ಹಾಲ ರಮೇಶ್ ,ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳು, ಕೆಎಸ್ ಆರ್‍ಪಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!