ಶಿವಮೊಗ್ಗ; ಮೇ 07; : ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯನ್ವಯ ಏ.28 ರಂದು ಶಿಕಾರಿಪುರ ತಾಲ್ಲೂಕಿನಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಶಿರಾಳಕೊಪ್ಪದಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿದಾಗ ಉಪ್ಪಿನಕಾಯಿ ತಯಾರಿಕಾ ಘಟಕದಲ್ಲಿ 02 ಬಾಲಕಾರ್ಮಿಕರು ಹಾಗೂ 01 ಕಿಶೋರ ಕಾರ್ಮಿಕ ಪತ್ತೆಯಾಗಿರುತ್ತಾರೆ. ಈ ಬಾಲಕರನ್ನು ರಕ್ಷಿಸಿ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಘಟಕದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ನೇಮಿಸಿಕೊಂಡ ಮಾಲೀಕರ ವಿರುದ್ಧ ರೂ.20,000/- ರಿಂದ ರೂ.50,000/-ಗಳವರೆಗೆ ದಂಡವನ್ನು ಅಥವಾ 6 ತಿಂಗಳಿನಿAದ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಅರಿವು ಮೂಡಿಸಲಾಯಿತು.
ಈ ತಪಾಸಣೆಯಲ್ಲಿ ಫಕೀರಪ್ಪ ಗೋಡಿ ಕಾರ್ಮಿಕ ನಿರೀಕ್ಷಕರು ಶಿಕಾರಿಪುರ, ರಘುನಾಥ ಎ.ಎಸ್ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆಯ ಮೂರ್ತಿ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳಾದ ಅರ್ಪಿತ, ದೀಪ್ತಿ ಹಾಜರಿದ್ದರು.
