ಶಿವಮೊಗ್ಗ, ಮಾರ್ಚ್ 31 ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಜಾಗೃತಿ ಮೂಡಿಸುವ ಸಲುವಾಗ್ಗಿ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.
ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದಂತೆ ಮತದಾನದದಿನವೂ ಉತ್ಸಾಹದಲ್ಲಿ ತಪ್ಪದೇ ಮತದಾನ ಮಾಡಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮ ಟಿ ಆರ್, ಸುಪ್ರಿಯಾ. ರತ್ನಾಕರ್. ರೇಣು. ಗೀತಾ ಮತ್ತು ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು, ಹಾಜರಿದ್ದರು.

error: Content is protected !!