ಮೇ. 03 : ಶಿವಮೊಗ್ಗ : ದಿನಾಂಕ:20.05.2025 ರಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ಕಾರದ ಮಹತ್ವದ ಯೋಜನೆ ಹೊಸ ಕಂದಾಯ ಗ್ರಾಮಗಳ ರಚನೆ ಕುರಿತು ಹಕ್ಕುಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಸಲು ಈಗಾಗಲೇ ದಿನಾಂಕ ನಿಗಧಿಪಡಿಸಲಾಗಿದೆ.

ಈ ವಿಷಯದ ಕುರಿತು ಈಗಾಗಲೇ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲ್ಲೂಕುಗಳಲ್ಲಿ ಹೊಸ ಕಂದಾಯ ಗ್ರಾಮಗಳ ರಚಿಸುವ ಕುರಿತು ಸ್ವೀಕೃತವಾದ ಅರ್ಜಿಗಳ ವಿಚಾರದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರಕ್ಕೆ ನೆಲಕಿಮ್ಮತ್ತನ್ನು ಪಾವತಿಸುವ ಕುರಿತು ತಿಳುವಳಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರರಿಂದ ನೀಡಲಾಗಿದೆ.

ಕೂಡಲೇ ಫಲಾನುಭವಿಗಳು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಕಛೇರಿಯನ್ನು ಸಂಪರ್ಕಿಸಿ 2 ದಿನಗಳ ಒಳಗಾಗಿ ಸರ್ಕಾರಕ್ಕೆ ನೆಲಕಿಮ್ಮತ್ತನ್ನು ಪಾವತಿಸುವ ಕುರಿತು ಕ್ರಮವಹಿಸುವಂತೆ ಈ ಮೂಲಕ ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!