ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್(INC) ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಸೋಮವಾರ ರಾಮಣ್ಣ ಶೆಟ್ಟಿ ಪಾರ್ಕಿನ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು ನಂತರ ಶಿವಮೊಗ್ಗ ನಗರದ ಪ್ರಮುಖ ಬೀದಿಗಳಲ್ಲಿ ಕಾರ್ಯಕರ್ತರೊಂದಿಗೆ ಭವ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು
ಮೆರವಣಿಗೆಯಲ್ಲಿ ಸ್ತಬ್ದ ಚಿತ್ರಗಳು ಜಾನಪದ ಕಲಾತಂಡಗಳು ಹಾಗೂ ಬಾರಿಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು

ನಟ ಶಿವರಾಜ್ ಕುಮಾರ್ ,ಸಚಿವ ಮಧು ಬಂಗಾರಪ್ಪ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಂಜುನಾಥ ಬಂಡಾರಿ, ಕಿಮ್ಮನೆ ರತ್ನಾಕರ್, ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಸೌಗಂಧಿಕಾ ರಘುನಾಥ್, ಯೋಗೀಶ್, ಕಲಗೋಡು ರತ್ನಾಕರ್ ಇತರರು ಉಪಸ್ಥಿತರಿದ್ದರು

ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಗುರುದತ್ತ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದರು

error: Content is protected !!